ವಿಜಯಪುರ, ಡಿ 04 (DaijiworldNews/MS): ಖಾಸಗಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೆಕ್ಕೆಜೋಳ ತುಂಬಿದ್ದ ಮೂಟೆ ಕುಸಿದು ಅದರಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಈಗಾಗಲೇ ಮೂವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜಗುರು ಇಂಡಸ್ಟ್ರೀಸ್ ಗೋದಾಮಿನ ಫುಡ್ ಪ್ರೊಸೆಸಿಂಗ್ ಯುನಿಟ್ನಲ್ಲಿ ಘಟನೆ ನಡೆದಿದ್ದು, ಗೋದಾಮಿನಲ್ಲಿ ಧಾನ್ಯಗಳ ಚೀಲಗಳನ್ನು ಜೋಡಿಸುವ ಕೆಲಸದಲ್ಲಿ ಬಿಹಾರ ಮೂಲದ ಕಾರ್ಮಿಕರು ನಿರತರಾಗಿದ್ದರು.ಈ ಹಂತದಲ್ಲಿ ಮೂಟೆ ಜೋಡಿಸುವ ಕೆಲಸದಲ್ಲಿ ತೊಡಗಿದ್ದಾಗಲೇ ಏಕಾಏಕಿ ಹಿಟ್ಟು ತುಂಬಿದ ಚೀಲಗಲು ಕುಸಿದು ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಬಿದ್ದಿದೆ.
ಕಾರ್ಮಿಕರನ್ನು ರಕ್ಷಿಸಲು 4 ಜೆಸಿಬಿಗಳಿಂದ ಕಳೆದ ಎರಡು ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ.ಸ್ಥಳಕ್ಕೆ ಎಸ್.ಪಿ. ಋಷಿಕೇಶ ಸೋನಾವಣೆ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.