ಬೆಳಗಾವಿ, ಡಿ 5(DaijiworldNews/AK): ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಮಾತನಾಡಿ ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.
ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.