ಹೈದರಾಬಾದ್, ಡಿ 05 (DaijiworldNews/AK): ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ನ ಶಾಸಕಾಂಗ ಪಕ್ಷ ಆಯ್ಕೆ ಮಾಡಿದೆ.
ಹೈಕಮಾಂಡ್ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.ಡಿಸೆಂಬರ್ 7 ರಂದು ತೆಲಂಗಾಣ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಅವರೊಂದಿಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.