ನವದೆಹಲಿ, ಡಿ 07 (DaijiworldNews/AK): ಆದಾಯ ತೆರಿಗೆ ಇಲಾಖೆಯು ಒಡಿಶಾ ಮತ್ತು ಜಾರ್ಖಂಡ್ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಕಚೇರಿ ಮತ್ತು ಕಂಪನಿಗೆ ಸಂಪರ್ಕ ಹೊಂದಿದ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಸುಮಾರು 200 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ
ದಾಳಿ ವೇಳೆ ಭಾರೀ ಪ್ರಮಾಣದಲ್ಲಿ ನೋಟುಗಳು ಇದ್ದ ಕಾರಣ ನೋಟು ಎಣಿಸುವ ಯಂತ್ರಗಳು ಕೆಟ್ಟು ನಿಂತಿವೆ ಎಂದು ಐಟಿ ಮೂಲಗಳು ತಿಳಿಸಿವೆ.
ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬಿಡಿಪಿಎಲ್ ಸೇರಿದ ಕೋಲ್ಕತ್ತಾ ಮತ್ತು ರಾಂಚಿಯಲ್ಲಿನ ನೋಂದಾಯಿತ ಕಚೇರಿಗಳು ಸೇರಿದಂತೆ ಬೌಧ್, ಬೋಲಂಗಿರ್, ರಾಯ್ಗಢ ಮತ್ತು ಸಂಬಲ್ಪುರದಲ್ಲಿನ ಡಿಸ್ಟಿಲರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಗಳನ್ನು ನಡೆಸಲಾಗಿತ್ತು.
ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರ ನಿವಾಸಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಒಡಿಶಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಬಿಡಿಪಿಎಲ್ ಒಡಿಶಾದಾದ್ಯಂತ ಕಾರ್ಯನಿರ್ವಹಿಸುತ್ತದೆ. ಪ್ರಸ್ತುತ ಹಲವು ಸ್ಥಳಗಳಲ್ಲಿ ದಾಳಿ ನಡೆಯುತ್ತಿದ್ದು, ತೆರಿಗೆ ವಂಚನೆಯ ನಿಖರ ಮೊತ್ತ ಇನ್ನೂ ಬಹಿರಂಗವಾಗಿಲ್ಲ.