ಹೈದರಾಬಾದ್, ಡಿ 07 (DaijiworldNews/PC): ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಗುರುವಾರ ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು.
ಪ್ರಮಾಣವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿದಂತೆ ವಿವಿಧ ಸಚಿವರು ಪ್ರಮಾಣವಚನವನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸಿದ್ದು 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಬಹುಮತ ಪಡೆದಿತ್ತು.