ಹೊಸದಿಲ್ಲಿ, ಡಿ 08 (DaijiworldNews/PC): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪ್ರಶ್ನಿಸಿ ಅನೇಕ ಅರ್ಜಿಗಳು ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿದ್ದು ಇವುಗಳ ವಿಚಾರಣೆ ಪೂರ್ತಿಗೊಳಿಸಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 11ರಂದು ತನ್ನ ಅಂತಿಮ ಪ್ರಕಟಿಸಲಿದೆ.
2019ರಲ್ಲಿ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಆರ್ಟಿಕಲ್ 270 ರದ್ದು ಮಾಡಿ ಐತಿಹಾಸ ನಿರ್ಧಾರವನ್ನು ಘೋಷಿಸಿತ್ತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿತ್ತು.
ಕೇಂದ್ರದ ಈ ನಿರ್ಧಾರವನ್ನು ವಿಪಕ್ಷಗಳು ವಿರೋಧಿಸಿತ್ತು. ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರದ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪನ್ನು ಡಿಸೆಂಬರ್ 11ಕ್ಕೆ ಕಾಯ್ದಿರಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಹಾಗೂ ಸೂರ್ಯಕಾಂತ್ ನೇತೃತ್ವ ಪೀಠ ಅರ್ಜಿ ವಿಚಾರಣೆ ನಡೆಸಿದೆ. 16 ದಿನ ವಿಚಾರಣೆ ಬಳಿಕ ಇದೇ ಸೋಮವಾರ ತೀರ್ಪು ಪ್ರಕಟಿಸಲಿದೆ.