ಡೆಹ್ರಾಡೂನ್, ಡಿ 9(DaijiworldNews/SK):ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದ್ದು, 2024-25 ರ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಆಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ ನಾಯಕ್ವ ಗುಣ ಇಡೀ ಪ್ರಪಂಚವೇ ಭಾರತದತ್ತ ತಿರುಗುವಂತೆ ಮಾಡಿದೆ. ಕಳೆದ ಒಂದು ದಶಕದಿಂದ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಗಣನೀಯವಾಗಿ ಸಾಧನೆ ಮಾಡುತ್ತ ಬಂದಿದ್ದು, ಇದು ನಮ್ಮ ದೇಶಕ್ಕೆ ಹೆಮ್ಮೆಯ ತರುವ ವಿಷಯ ಎಂದರು.
ಇನ್ನು 2014 ರಿಂದ 2023 ರ ನಡುವೆ ಭಾರತವು 11 ನೇ ಸ್ಥಾನದಿಂದ ವಿಶ್ವದ ಐದನೇ ದೊಡ್ಡ ಆರ್ಥಿಕತೆಗೆ ಏರಿದ್ದು, ಸ್ವಾತಂತ್ರ್ಯದ 75 ವರ್ಷಗಳ ಅವಧಿಯಲ್ಲಿ ದೇಶವು ಹಿಂದೆಂದೂ ಇಷ್ಟು ದೊಡ್ಡ ಪ್ರಗತಿಯನ್ನು ಸಾಧಿಸಿರಲಿಲ್ಲ ಎಂದರು.