ಬೆಂಗಳೂರು, ಡಿ 10 (DaijiworldNews/AK): ಮಹಿಳೆ ಒಬ್ಬರು ಮನೆ ಕ್ಲೀನ್ ಮಾಡುವ ವೇಳೆ ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.
ಗುಜರಾತ್ ಮೂಲದ ಖುಷ್ಬೂ ಅಶೀಷ್ ತ್ರಿವೇದಿ (31) ಮೃತಪಟ್ಟ ದುರ್ದೈವಿ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದರು. ದಂಪತಿಗಳು ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್ನ 5ನೇ ಮಹಡಿಯಲ್ಲಿ ವಾಸವಾಗಿದ್ದರು.
ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಖುಷ್ಬೂ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನುಈ ಘಟನೆ ಸಂಬಂಧಪಟ್ಟಂತೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.