ಬೆಂಗಳೂರು, ಡಿ 12 (DaijiworldNews/MS): ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಘಟನೆಮಾಸುವ ಮುನ್ನವೇ ಇದೀಗ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೋರ್ವ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ.
ಸೋಮವಾರ ಡಿ.11 ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.