ನವದೆಹಲಿ, ಡಿ 13 (DaijiworldNews/MS): ಲೋಕಸಭೆ ಕಲಾಪಕ್ಕೆ ನುಗ್ಗಿ ಇಬ್ಬರು ಯುವಕರು ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸಂಸದರ ಪೀಠ ತಲುಪಿ ಅಶ್ರವಾಯು ಎರಚಿದ ಇಬ್ಬರು ದುಷ್ಕರ್ಮಿಗಳ ಗುರುತು ಪತ್ತೆಯಾಗಿದೆ.
ಇವರನ್ನು ಮೈಸೂರು ಮೂಲದ ಮನೋರಂಜನ್, ಮತ್ತೊಬ್ಬನನ್ನು ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಇಬ್ಬರು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದರು ಎಂದು ತಿಳಿದುಬಂದಿದೆ.
ರೈತನ ಮಗನಾಗಿರುವ ಮನೋರಂಜನ್ ಇಂಜಿನಿಯರ್ ಓದಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಮನೋರಂಜನ್ ತಂದೆಯ ಪ್ರತಿಕ್ರಿಯೆ:
"ನನ್ನ ಮಗ ಮನೋರಂಜನ್ ಬಿಇ ಓದಿದ್ದು, ದೆಹಲಿ-ಬೆಂಗಳೂರು ಅಂತ ಓಡಾಡುತ್ತಿರುತ್ತಾನೆ. ಆತ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ 2014ರಲ್ಲಿ ಬಿಇ ಮುಗಿಸಿದ್ದ. ನಾನೊಬ್ಬ ರೈತ, ಆತ ಯಾಕಾಗಿ ಈ ರೀತಿ ಮಾಡಿದ್ದಾನೆ ಎಂಬುದು ಗೊತ್ತಿಲ್ಲ. ಆತ ತಪ್ಪು ಮಾಡಿದ್ದರೆ ಆತನನ್ನು ಶಿಕ್ಷೆಯಾಗಲಿ" ಎಂದು ತಂದೆ ಪ್ರತಿಕ್ರಿಯೆ ನೀಡಿದ್ದಾರೆ.