ಬೆಂಗಳೂರು, ಏ 18(Daijiworld News/SM): ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆ ಸಂದರ್ಭ ನೀತಿ ಸಂಹಿತ ಉಲ್ಲಂಘಿಸಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಸಂಚಾರಿ ತಂಡ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂಬ ಆರೋಪ ಮಾಡಲಾಗಿತ್ತು. ಚುನಾವಣಾ ಅಧಿಕಾರಿಗಳು ನೀಡಿದ ದೂರಿನ ಅನ್ವಯ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು.
ಮತದಾನದ ದಿನ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ತೇಜಸ್ವಿ ಸೂರ್ಯ ಅವರು ಮತದಾರರನ್ನು ಓಲೈಸಿದ್ದಾರೆ ಎಂಬುದು ದೂರಿನಲ್ಲಿರುವ ಆರೋಪ. 'ಟ್ವಿಟರ್ನಲ್ಲಿರುವ ವಿಡಿಯೋವನ್ನು ಡಿಲೀಟ್ ಮಾಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.