ನವದೆಹಲಿ, ಡಿ 15 (DaijiworldNews/AK): ಲೋಕಸಭೆಯಿಂದ ಉಚ್ಚಾಟನೆಗೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಗೊಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3, 2024ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಹೇಳಿದೆ.
ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು. ಈ ಉಚ್ಚಾಟನೆಯನ್ನು ಪ್ರಶ್ನಿಸಿ ಮಹುವಾ ನಮೊಯಿತ್ರಾ ಸುಪ್ರೀಂ ಕೋರ್ಟ್ನ ಮೊರೆ ಹೋಗಿದ್ದರು. ಇದೀಗ ವಿಚಾರಣೆಯನ್ನು ಮೂಂದೂಡಿದೆ.