ಜೈಪುರ್, ಡಿ 15 (DaijiworldNews/MR): ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದರೆ. ಇಂದು ಭಜನ್ ಲಾಲ್ ಶರ್ಮಾ ಅವರು ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತೀಯ ಜನತಾ ಪಕ್ಷದ ಅಚ್ಚರಿಯ ನಡೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭಜನ್ ಲಾಲ್ ಶರ್ಮಾಗೆ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಿದ್ದರು.
56 ವರ್ಷದ ಭಜನ್ ಲಾಲ್ ಶರ್ಮಾ ಅವರು ಸಂಗನೆರ್ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಮೊದಲ ಅವಕಾಶದಲ್ಲಿಯೇ ಅವರು ಸಿಎಂ ಸ್ಥಾನಕ್ಕೇರಿದ್ದಾರೆ. ಭಜನ್ ಲಾಲ್ ಶರ್ಮಾ ಅವರು ಮೂಲತ ಭಾರತಪುರದವರು. ಆದರೆ, ಪಾರ್ಟಿಯು ಅವರಿಗೆ ಆ ಕ್ಷೇತ್ರದಲ್ಲಿ ಟಿಕೆಟ್ ನೀಡಿರಲಿಲ್ಲ. ಬದಲಿಗೆ ಅವರಿಗೆ ಸಂಗನೇರ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಿದ ನಂತರ ಬಿಜೆಪಿ ಗೆದ್ದುಕೊಂಡ ರಾಜ್ಯದಲ್ಲಿ ಬಿಜೆಪಿಯ ದೀರ್ಘಾವಧಿಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಅವರು ಕೂಡ ಒಬ್ಬರು.