ಬೆಂಗಳೂರು, ಡಿ 15 (DaijiworldNews/AK): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಸರಕಾರದ ಆದೇಶಕ್ಕೆ ವಾದ ಮಂಡಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು ಮಾಹಿತಿಯನ್ನು ನೀಡಿದ್ದು, ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್ ಜನರಲ್ ಅವರು ಸಮಯ ಕೋರಿದ್ದಾರೆ.
ಇದರಿಂದ 2024ರ ಜ.5ರಂದು ಅಡ್ವೋಕೇಟ್ ಜನರಲ್ ವಿಸ್ತರವಾದ ಉತ್ತರ ನೀಡುವಂತೆ ಹೇಳಿ ವಿಚಾರಣೆ ಮುಂದೂಡಿತು.