ಬೆಳಗಾವಿ, 16(DaijiworldNews/AK): ಹೊಸ ವಂಟಮುರಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03ಎಕರೆ ಜಮೀನು ಮಂಜೂರು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀ ಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿದೆ ಎಂದರು.
ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀ ಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀ ಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿದೆ .