ಬೆಂಗಳೂರು, ಡಿ 17 (DaijiworldNews/PC): ಸಂಸತ್ ನಲ್ಲಿ ನಡೆದ ದಾಳಿಗೆ ನಿರುದ್ಯೋಗ ಕಾರಣ ಎಂಬ ರಾಹುಲ್ ಗಾಂಧಿಯ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚೆ ಆಗಲಿ, ಬೇಡ ಅನ್ನೊಲ್ಲ.
ನಿರುದ್ಯೋಗ ಇದೆ ಅಂತ ಹೇಳಿ ಕೊಲೆ ಮಾಡ್ತೀನಿ, ಎಂಪಿಯನ್ನ, ಕೊಲೆ ಮಾಡ್ತೀನಿ ಅಂದ್ರೆ. ಕರ್ನಾಟಕದಲ್ಲಿ ನಿರುದ್ಯೋಗ ಇಲ್ಲವಾ? ಛತ್ತೀಸ್ಗಢದಲ್ಲಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇತ್ತು ಅಲ್ಲಿ ನಿರುದ್ಯೋಗ ಇಲ್ಲವಾ. ನಿರುದ್ಯೋಗ ಇದೆ ಅಂತ ದೇಶದ ವಿರೋಧಿ, ದೇಶದ್ರೋಹಿ, ಟೆರರಿಸ್ಟ್ ಜೊತೆ ಲಿಂಕ್ ಇಟ್ಟುಕೊಳ್ಳುವ ಸಂಘಟನೆ ಜೊತೆ ಹೀಗೆ ಮಾಡೋಕೆ ನಿಮ್ಮ ಬೆಂಬಲ ಇದೆಯಾ ರಾಹುಲ್ ಗಾಂಧಿ ಎಂದು ಪ್ರಶ್ನಿಸಿದ್ದಾರೆ.
ಮರ್ಡರ್ ಮಾಡಿದವನಿಗೂ ಅವನದ್ದೇ ಲಾಜಿಕ್ ಇರತ್ತೆ. ಆದರೆ ಇದನ್ನ ಸಮಾಜ ಒಪ್ಪುತ್ತಾ? ರಾಹುಲ್ ಗಾಂಧಿ ಎಷ್ಟು ಚೈಲ್ಡಿಶ್ ಆಗಿ ಮಾತಾಡ್ತಾ ಇದ್ದೀರಾ. ಮೋದಿ ವಿರೋಧ ಮಾತನಾಡುವ ಭರದಲ್ಲಿ ರಾಷ್ಟ್ರದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ತೀರಾ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದ್ರು.