ಹೊಸದಿಲ್ಲಿ,ಡಿ24 (daijiworldNews/RA):ಸದ್ಯ ರಾಷ್ಟ್ರೀಯ ಕುಸ್ತಿ ಫೆಡರೇಶನ್ ನ ಜಂಗಿ ಕುಸ್ತಿ ಮುಗಿಯುವ ಯಾವುದೇ ಲಕ್ಷಣಗಳು ಕಾಣ್ತಾ ಇಲ್ಲ.
ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಗೆಲುವು ಸಾಧಿಸಿದ್ದರು.
ಇದಕ್ಕೆ ಹಲವರು ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದರು.ಇದರ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವಾಲಯವು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ ಎಂದು ತಿಳಿದು ಬಂದಿದೆ.
ಈ ಮೂಲಕ ಕ್ರೀಡಾ ಸಚಿವಾಲಯವು ಸಂಜಯ್ ಸಿಂಗ್ ನೇತೃತ್ವದ ಹೊಸ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತು ಮಾಡಿದೆ.
ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಕುಸ್ತಿ ಫೆಡರೇಶನ್ ಸಂಪೂರ್ಣ ನಿರ್ಲಕ್ಷ ಮಾಡಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕ್ರೀಡಾ ಸಚಿವಾಲಯವು ತನ್ನ ಪ್ರಟಕಣೆಯಲ್ಲಿ ತಿಳಿಸಿದೆ.