ಹುಬ್ಬಳ್ಳಿ, ಡಿ 25 (DaijiworldNews/AK): ಬಿ.ಕೆ .ಹರಿಪ್ರಸಾದ್ ಅವರ ಮಾನಸಿಕ ಸ್ಥಿತಿ ಸರಿ ಇಲ್ಲ. ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಲ್ಲಿ ಹರಿಪ್ರಸಾದ್ ಅವರಿಗೆ ಹಿಂಸೆ ಆಗುತ್ತಿದ್ದು, ಹಿಂಸೆ ತಾಳಲಾರದೆ ಏನೇನು ಹೇಳಿಕೆ ಕೊಡುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಂತಹ ಪಕ್ಷಕ್ಕೆ ಯಾರು ಹೋಗಲಾರರು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ ಬಳಿಕ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಲೋಕಸಭಾ ಚುನಾವಣೆ ಒಳಗಾಗಿ ಒಕ್ಕೂಟ ಛಿದ್ರವಾಗಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಸರಿಯಲ್ಲ.ಯುವಕರಿಗೆ ಆದ್ಯತೆ ನೀಡಬೇಕೆಂಬ ಹಿನ್ನೆಲೆಯಲ್ಲಿ, ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ. ವರಿಷ್ಠರ ತೀರ್ಮಾನವನ್ನು ಗೌರವಿಸುವ ಕೆಲಸ ಯತ್ನಾಳ್ ಮಾಡಬೇಕು ಎಂದರು