ಬೆಂಗಳೂರು,ಡಿ 26 (DaijiworldNews/MS): ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಬೆಂಕಿ ಏಕಾಏಕಿ ಹತ್ತಿ ಉರಿದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.
ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಘಟನೆಯಿಂದ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.