ನವದೆಹಲಿ, ಡಿ 27 (DaijiworldNews/MR): ಮಂಗಳವಾರ ಸಂಜೆ ನವದೆಹಲಿಯ ಲುಟಿಯೆನ್ಸ್ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ ಘಟನೆ ಮಂಗಳವಾರ ಸಂಜೆ 5 ಗಂಟೆಗೆ ನಡೆದಿದೆ. ಇದು ಭಾರತೀಯ ಭದ್ರತಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳನ್ನು ಚಿಂತೆಗೀಡು ಮಾಡಿದೆ.
ಈ ಘಟನೆಗೆ ಸಂಬಂಧಿಸಿದಂತೆ ಇಡೀ ಪ್ರದೇಶದಾದ್ಯಂತ ವ್ಯಾಪಕ ತನಿಖೆಯನ್ನು ನಡೆಸಲಾಗಿದೆ. ಆದರೆ ಈ ಸ್ಪೋಟದಿಂದ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದ ಸಮಯದಲ್ಲಿ, ಇಸ್ರೇಲಿ ರಾಯಭಾರ ಕಚೇರಿಯ ಬಳಿ ಸ್ಫೋಟ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಅಬ್ದುಲ್ ಕಲಾಂ ರಸ್ತೆಯ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಈ ಸ್ಫೋಟವು ಉದ್ದೇಶಪೂರ್ವಕ ವಿಧ್ವಂಸಕ ಕೃತ್ಯವಾಗಿದೆ ಎಂದು ಇಸ್ರೇಲಿ ರಾಯಭಾರ ಕಚೇರಿಯು ದೃಢಪಡಿಸಿದೆ.
ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ರಾಯಭರ ಕಛೇರಿ ಬಳಿ ಸ್ಫೋಟ ಸಂಭವಿಸಿದೆ. ನಮ್ಮ ಎಲ್ಲಾ ಉದ್ಯೋಗಿಗಳು ಸುರಕ್ಷಿತವಾಗಿದ್ದಾರೆ ಮತ್ತು ಎಲ್ಲಾ ರಾಜತಾಂತ್ರಿಕರು ಸಹ ಸುರಕ್ಷಿತವಾಗಿದ್ದಾರೆ. ನಮ್ಮ ಭದ್ರತಾ ತಂಡಗಳು ಸ್ಥಳೀಯ ದೆಹಲಿ ಭದ್ರತಾ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೇಲಿ ಮಿಷನ್ ನ ಉಪಮುಖ್ಯಸ್ಥ ಒಹಾದ್ ನಕಾಶ್ ಕೈನರ್ ತಿಳಿಸಿದ್ದಾರೆ.