ಕೋಲ್ಕತ್ತಾ, ಡಿ 27 (DaijiworldNews/AK): ಪಶ್ಚಿಮ ಬಂಗಾಳದ ನಾಯಕ ಅನುಪಮ್ ಹಜ್ರಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಲೋಕಸಭೆಯ ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆ ವಿರುದ್ಧ ಟೀಕಿಗಳು ಕೇಳಿ ಬಂತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.
ಗೃಹ ಸಚಿವ ಅಮಿತ್ ಶಾ ಮತ್ತು ಜೆ.ಪಿ ನಡ್ಡಾ ಅವರು ರಾಜಕೀಯ ಕಾರ್ಯಕ್ರಮಗಳಿಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಸಂದರ್ಭದಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಪಕ್ಷದೊಳಗಿನ ಭಿನ್ನಮತೀಯರಿಗೆ ಶಿಸ್ತು ಪಾಲಿಸುವಂತೆ ಹಾಗೂ ನಾಯಕತ್ವವನ್ನು ನಿಷ್ಠೆಯಿಂದ ಅನುಸರಿಸುವಂತೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎನ್ನಲಾಗಿದೆ.