ವಿಜಯಪುರ , ಡಿ 30 (DaijiworldNews/AK): ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣ ಮಾಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಆರೋಪಕ್ಕೆ ಯಾವುದೇ ಹುರುಳಿಲ್ಲ ಸಾಕ್ಷಿಗಳಿದ್ದರೆ ಸರಕಾರಕ್ಕೆ ನೀಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯ ಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಪ್ರ ತಿಕ್ರಿಯಿಸಿ, ಯತ್ನಾಳ್ ಮಾಡಿರುವ ಆರೋಪದಲ್ಲಿ ಗಂಭೀರತೆ ಇಲ್ಲ , ಹೀಗಾಗಿ ಇಂಥವಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ . ಅಷ್ಟಕ್ಕೂ ಪ್ರಾಮಾಣಿಕ ಆಡಳಿತ ನಡೆಸಿರುವ ಯಡಿಯೂರಪ್ಪ ಅವರಿಗೆ ಯಾರ ಅನುಕಂಪದ ಅಗತ್ಯ ವೂ ಇಲ್ಲ ಎಂದರು.
ಪಕ್ಷದ ನಾಯಕರ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರೂ ಸ್ವ ಪಕ್ಷೀ ಯ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೇಂದ್ರ ವರಿಷ್ಠ ರಿಗೆ ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟ ಪಡಿಸಿದರು.
ಯಡಿಯೂರಪ್ಪ ಅವರ ಮಗ ಎಂಬ ಕಾರಣಕ್ಕೆ ಅವರ ಕೃಪೆಯಿಂದ ಬಿಜೆಪಿ ವರಿಷ್ಠ ರು ನನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದ ಹೊಣೆ ನೀಡಿಲ್ಲ . ಪಕ್ಷ ಕಟ್ಟುವಲ್ಲಿ ಶ್ರಮಿಸಿದ ನನ್ನ ಸೇವೆಯನ್ನು ಪರಿಗಣಿಸಿ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದರು.