ಅಯೋಧ್ಯೆ, 31 (DaijiworldNews/PC): 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ನೆರವೇರಲಿದೆ. ವಿಶೇಷವೇನೆಂದರೆ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ.
2024ರ ಜನವರಿ 22ರಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಮ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ.
ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ ನೀರನ್ನು ತರಿಸಿರುವುದು ವಿಶೇಷವಾಗಿದೆ.
ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ಏಕೆ ತರಿಸಲಾಗಿದೆ ಎಂದರೆ ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದರು. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ. ಈಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನೆಯಾಗುತ್ತಿದ್ದು ಬಾಲರಾಮನ ಅಭಿಷೇಕಕ್ಕೆ ಸೀತಾಮಾತೆಯ ತವರು ನೇಪಾಳದಿಂದ ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ
ಸಪ್ತಕೋಶಿ, ನಾರಾಯಿಣಿ, ಮಹಾಕಾಳಿ, ಕಾಳಿ ಗಂಡಕಿ, ಗಂಗಾ ಸಾಗರ್, ಬಾಗ್ಮತಿ, ಕಮಲಾ ನದಿಗಳು ಸೇರಿದಂತೆ 16 ಪವಿತ್ರ ನದಿಗಳ ನೀರನ್ನು ಶ್ರೀರಾಮನ ಅಭಿಷೇಕಕ್ಕಾಗಿ ತರಿಸಲಾಗಿದೆ. ನೇಪಾಳದಲ್ಲಿರುವ ರಾಮಭಕ್ತರ ಸಮಿತಿ ಮೂಲಕ ನೀರನ್ನು ಸಂಗ್ರಹಿಸಿ ಭಾರತಕ್ಕೆ ತರಿಸಲಾಗಿದೆ.