ಬೆಂಗಳೂರು, ಜ 03 (DaijiworldNews/HR): ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ.
ಇನ್ನು ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಹೇಳಿದ್ದಾರೆ.