ಬೆಂಗಳೂರು, ಜ 05 (DaijiworldNews/HR): ನೈಸ್ ಯೋಜನೆಯಿಂದ ಬಡವರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸಿ ಬಡವರ ಜಮೀನು ಉಳಿಸಿಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿರುತ್ತೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷ ನೈಸ್ ಅಕ್ರಮದ ವಿರುದ್ದ ಧ್ವನಿ ಎತ್ತಿದ್ದು, ಈ ಬಗ್ಗೆ ವಿಧಾನಸಭೆಯಲ್ಲೂ ಸುದೀರ್ಘವಾಗಿ ಚರ್ಚೆಯಾಗಿದೆ ಎಂದರು.
ಇನ್ನು ನೈಸ್ ರಸ್ತೆಗೆ ಒಳಪಡದೆ ಇರುವ ಭೂಮಿ ಎಷ್ಟಿದೆ ಅಂತಾ ಅಂದಾಜು ಮಾಡಿದಾಗ ವ್ಯಾಲ್ಯೂ ಜಾಸ್ತಿಯಾಗುತ್ತದೆ. ಸಿಎಂ ಸಿದ್ದರಾಮಯ್ಯ ಯಾವಾಗಲೂ ಬಡವರ ಪರ ಎಂದು ಹೇಳುತ್ತಾರೆ. ಬಡವರನ್ನು ಅವರ ಜಮೀನನ್ನು ಸಿದ್ದರಾಮಯ್ಯ ಉಳಿಸಿಕೊಟ್ರೆ ಅವರಿಗೆ ಅಭಾರಿಯಾಗಿರುತ್ತೇನೆ ಎಂದಿದ್ದಾರೆ.