ಬೆಂಗಳೂರು, ಜ 08 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂತ್ರಿಗಳ ಬಗ್ಗೆ ಹಿಡಿತ ಇದ್ದರೆ ಅವರನ್ನ ಕರೆದು ಸರಿಯಾಗಿ ಬುದ್ಧಿ ಹೇಳೋದು ಒಳ್ಳೆಯದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಂತ್ರಿಗಳಿಗೆ ನಾಡಿನಲ್ಲಿ ಗ್ಯಾರಂಟಿ ಹೆಸರಲ್ಲಿ ಸರ್ಕಾರ ರಚನೆ ಮಾಡಿ ಯಾವುದೇ ಅಭಿವೃದ್ಧಿ ರಾಜ್ಯದಲ್ಲಿ ಕಾಣುತ್ತಿಲ್ಲ. ಇದನ್ನು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿದ್ದಾರೆ ಎಂದರು.
ಇನ್ನು ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದ್ದು, ಸರ್ಕಾರ ಬಂದು 8 ತಿಂಗಳು ಆಗಿದೆ. ಬರ ಪರಿಹಾರ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ. 2 ಸಾವಿರ ಹಣ ಕೊಡಲು 105 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅದು ಎಷ್ಟು ಜನರಿಗೆ ಹೋಗುತ್ತದೆ. 30 ಸಾವಿರ ಕೋಟಿ ನಷ್ಟ ಅಂತ ಹೇಳಿ 105 ಕೋಟಿ ಬಿಡುಗಡೆ ಮಾಡಿದ್ರೆ ಸಾಕಾ? ಇಷ್ಟು ಹಣದಿಂದ ಯಾವ ಪುರುಷಾರ್ಥ ಸಾಧಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.