ಇಂಫಾಲ್, ಜ 10 (DaijiworldNews/MS): ಇಂಫಾಲ್ ಪೂರ್ವ ಜಿಲ್ಲೆಯ ಪ್ರಸಿದ್ಧ ಮೈದಾನ ಹಫ್ತಾ ಕಾಂಗ್ಜೆಬುಂಗ್ನಿಂದ ಪ್ರಾರಂಭವಾಗಲಿರುವ ರಾಹುಲ್ ಗಾಂಧಿಯವರ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಗೆ ಮಣಿಪುರ ಸರ್ಕಾರ ಬುಧವಾರ ನಿರಾಕರಿಸಿದೆ. ಜನವರಿ 14 ರಂದು ಇಂಫಾಲ್ನಿಂದ ಯಾತ್ರೆ ಪ್ರಾರಂಭವಾಗಬೇಕಿತ್ತು. ಬಳಿಕ ಯಾತ್ರೆ ಆರಂಭಿಸಲು ಪರ್ಯಾಯ ಸ್ಥಳದ ವ್ಯವಸ್ಥೆ ಮಾಡುವಂತೆ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.
ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಕೆ ಮೇಘಚಂದ್ರ ಅವರು ಪಕ್ಷದ ನಾಯಕರ ತಂಡದೊಂದಿಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಬುಧವಾರ ಬೆಳಿಗ್ಗೆ ಅವರ ಕಚೇರಿ ಸಂಕೀರ್ಣ ಕ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಅನುಮತಿ ಸಾಧ್ಯವಿಲ್ಲ ಎಂದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಮೇಘಚಂದ್ರ, ಹೇಳಿದ್ದಾರೆ
ಮಣಿಪುರದ ಸಾರ್ವಜನಿಕ ಸ್ಥಳದಲ್ಲಿ ಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿದರೂ ಅದಕ್ಕೆ ಪರ್ಯಾಯ ಸ್ಥಳವನ್ನು ನಾವು ಹುಡುಕುತ್ತೇವೆ ಎಂದು ಹೇಳಿದ್ದಾರೆ.
ಮಣಿಪುರದಿಂದ ಮುಂಬೈಗೆ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14 ರಂದು ಇಂಫಾಲ್ನಿಂದ ಆರಂಭವಾಗಲಿದೆ. ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಎಐಸಿಸಿ ನಾಯಕರು ಇದರ ನೇತೃತ್ವ ವಹಿಸಲಿದ್ದಾರೆ. ಯಾತ್ರೆಯು ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದ್ದು, 66 ದಿನಗಳಲ್ಲಿ 15 ರಾಜ್ಯಗಳಲ್ಲಿ 6700 ಕಿ.ಮೀ. ಈ ಯಾತ್ರೆಯು 110 ಜಿಲ್ಲೆಗಳು, 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.