ಮೈಸೂರು, ಜ 13(DaijiworldNews/AK): ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎದುರಾಳಿಯಾದರೆ ಒಳ್ಳೆಯದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಸಿಎಂ ಸಿದ್ದರಾಮಯ್ಯ ಅಯೋಧ್ಯೆಗೆ ಉದ್ಘಾಟನೆ ನಂತರ ಹೋಗುತ್ತೇನೆ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದು ವಾಗ್ದಾಳಿ ನಡೆಸಿದರು.