ಬೆಂಗಳೂರು, ಜ 13 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದವರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ IPC ಸೆಕ್ಷನ್ 153,153A,505(2) ಅಡಿ ಎಫ್ಐಆರ್ ದಾಖಲಿಸಲಾಗಿದೆ.
ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಫೇಸ್ಬುಕ್, ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇನ್ನು ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಈ ಪೋಸ್ಟ್ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.