ಬೆಂಗಳೂರು,ಜ 18 (DaijiworldNews/HR): ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆಯಾಗಿದ್ದು, ಶೇಕಡವಾರು 10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಈ ಕುರಿತು ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.