ಬೆಳಗಾವಿ, ಜ 20 (DaijiworldNews/HR): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದರು.
ಇನ್ನು ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಯಾವುದೇ ಮಾನದಂಡ ಇಲ್ಲ. ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಸಚಿವರ ತಲೆದಂಡ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ.