ಚಿಕ್ಕಮಗಳೂರು,ಜ 21 (DaijiworldNews/PC): ಅಯೋಧ್ಯೆ ರಾಮಲಲ್ಲಾನ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು ಇಡೀ ದೇಶವೇ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.
ಕಾಂಗ್ರೆಸ್ ನ ಕೆಲ ನಾಯಕರು ವಿವಿಧ ರೀತಿಯ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದು ಬಿ.ಕೆ.ಹರಿಪ್ರಸಾದ್ ಅಯೋಧ್ಯೆಯಲ್ಲಿ ಜಗದ್ಗುರು ಇಲ್ಲ. ಅಲ್ಲಿರೋದು ವಿಶ್ವಗುರು. ವಿಶ್ವಗುರು ಏನೆಂದು ದೇಶಕ್ಕೆ ಗೊತ್ತು ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಚಿಕ್ಕವರಿದ್ದಾಗ ಶಂಕರಾಚಾರ್ಯರು ಹಿಂದು ಧರ್ಮದ ಮುಖ್ಯಸ್ಥರು ಎಂದು ಹೇಳಿಕೊಟ್ಟಿದ್ದಾರೆ. ಆದರೆ, ಶಂಕರರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆದರೆ ಅಲ್ಲಿ ಜಗದ್ಗುರು ಬದಲು ವಿಶ್ವಗುರು ಇದ್ದಾರೆ. ಅದರೆ ಬಿಜೆಪಿಯ ಕಾರ್ಯಕ್ರಮ ಎಂದು ವಾಗ್ದಾಳಿ ನಡೆಸಿದ್ದಾರೆ.
ಆಮಂತ್ರಣ ಕೊಡೋಕೆ ಇವರು ಯಾರು. ರಾಮ ಪೋನ್ ಮಾಡಿ ಹೇಳಿದ್ನ ಕೊಡಿ ಅಂತ. ಶಂಕರಾಚಾರ್ಯರು ಮಾಡಿದ್ರೆ ನಮಗೆ ಆಮಂತ್ರಣ ಬೇಡವಾಗಿತ್ತು. ದೇಶದಲ್ಲಿ 33 ಕೋಟಿ ದೇವರಿವೆ. ಎಲ್ಲಾದ್ರು ಹೋಗ್ತೀವಿ. ನಾವು ಮಾರಮ್ಮ,ಅಣ್ಣಮ್ಮ,ಬಳಿ ಹೋಗ್ತೀವಿ ಎಂದಿದ್ದಾರೆ.