ತಮಿಳುನಾಡು, ಜ 21 (DaijiworldNews/AK):ಅಯೋಧ್ಯಾ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ವೇಳೆ ಕೇಂದ್ರ ಸರಕಾರ ಮತ್ತು ತಮಿಳುನಾಡು ಸರಕಾರದ ನಡುವೆ ತೀವ್ರ ಆರೋಪ, ಪ್ರತ್ಯಾರೋಪಗಲು ಕೇಳಿ ಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಕ್ಸ್ ನಲ್ಲಿ ” ಅಯೋಧ್ಯೆಯ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳು ನಾಡು ಸರಕಾರ ನಿಷೇಧಿಸಿದೆ. ಶ್ರೀ ರಾಮ 200 ಕ್ಕೂ ಹೆಚ್ಚು ದೇವಾಲಯಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಯಾವುದೇ ಪೂಜೆ, ಭಜನೆ, ಪ್ರಸಾದ ಮತ್ತ ಅನ್ನದಾನ ನಡೆಸಲಾಗುತ್ತಿಲ್ಲ.ಶ್ರೀ ರಾಮನ ನಾಮಸ್ಮರಣೆಗೆ ಅವಕಾಶವಿಲ್ಲ.ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಹಿಡಿಯುತ್ತಿದ್ದಾರೆ.
ಹಿಂದೂ ವಿರೋಧಿ, ದ್ವೇಷಪೂರಿತ ಕ್ರಮವನ್ನು ಬಲವಾಗಿ ಖಂಡಿಸಿ ಎಂದು ಪೋಸ್ಟ್ ಮಾಡಿದ್ದರು.