ಅಯೋಧ್ಯೆ, ಜ 23 (DaijiworldNews/AK): ರಾಮ ಮಂದಿರ ಉದ್ಘಾಟನೆಯಾದ ಮರುದಿನ ಇಂದು ಮಂಗಳವಾರ ಮುಂಜಾನೆ ದೇವಾಲಯದ ಬಾಗಿಲು ಸಾರ್ವಜನಿಕ ದರ್ಶನಕ್ಕೆ ತೆರೆಯುತ್ತಿದ್ದಂತೆ ಜನರ ಸಾಗರವೇ ಹರಿದು ಬಂದಿದ್ದು, ಮಂದಿರದ ಆವರಣದಲ್ಲಿ ಭಕ್ತರ ತಳ್ಳಾಟ ಉಂಟಾಗಿದೆ.
ಇಂದು ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಸದ್ಯ ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿ ದರ್ಶನ ಸ್ಥಗಿತಗೊಳಿಸಲಾಗಿದೆ.
ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ" ಎಂದು ಪೊಲೀಸರು ರಾಂಪತ್ನಲ್ಲಿ ಘೋಷಿಸಿದ್ದಾರೆ.
ನಿನ್ನೆ ರಾತ್ರಿ, ಮಹಾಮಸ್ತಕಾಭಿಷೇಕ ಸಮಾರಂಭಕ್ಕಾಗಿ ಅಲಂಕೃತವಾಗಿದ್ದ ವಿಧ್ಯುಕ್ತ ಗೇಟ್ವೇ ಬಳಿ ಹೆಚ್ಚಿನ ಜನರು ಜಮಾಯಿಸಿದ್ದಾರೆ. ಪೊಲೀಸರಿಗೆ ಜನರನ್ನು ನಿಯಂತ್ರಿಸಲು ಕಷ್ಟವಾಗುತ್ತದ್ದು. ಮುಂಜಾನೆಯಿಂದಲೇ 3 ಗಂಟೆಯಿಂದಲೇ ಭಕ್ತರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ದೇವಾಲಯದ ಆವರಣದಲ್ಲಿ ಭಕ್ತರ ನೂಕು ನುಗ್ಗಾಟ ಉಂಟಾಗಿದೆ.