ಬೆಂಗಳೂರು,ಜ 23 (DaijiworldNews/ AK): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಗೂಂಡಾ ವರ್ತನೆಗೆ , ಸರ್ವಾಧಿಕಾರಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ ಎಂ ರೇವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾದರು.