ಬೆಂಗಳೂರು,ಜ 24 (DaijiworldNews/SK): ಪ್ರಧಾನಿ ಮೋದಿ ಅವರು ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ದಿನದಂದು ಉಪವಾಸ ಕೈಗೊಂಡಿದ್ದನ್ನು ವೀರಪ್ಪ ಮೊಯ್ಲಿ ಅವರು ಅವಹೇಳನ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಅವರು ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆರ್. ಅಶೋಕ್ ಅವರು, ಪ್ರಧಾನಿ ನರೇಂದ್ರಮೋದಿ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಸೇರಿ ಇನ್ನಿತರ ಪಕ್ಷದ ನಾಯಕರು ನಿರಂತರವಾಗಿ ಅಪಮಾನ ಮಾಡುತ್ತಿದ್ದಾರೆ.
ಇನ್ನು ಪ್ರಧಾನಿ ಮೋದಿಯವರು ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಅಂಗವಾಗಿ ಕೈಗೊಂಡ ಉಪವಾಸ ವೃತವನ್ನು ಅನುಮಾನದಿಂದ ನೋಡಿದ್ದಾರೆ. ಸತ್ಯ ಏನೆಂಬುದು ದೇಶದ ಜನರಿಗೆ ತಿಳಿದಿದೆ. ಆದರೆ ಈ ವಿಚಾರವಾಗಿ ಮೊಯ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು. ಇಲ್ಲವಾದರೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು’ ಎಂದು ಹರಿಹಾಯ್ದಿದ್ದಾರೆ.