ಪಿರಿಯಾಪಟ್ಟಣ, ಜ 24 (DaijiworldNews/AK):ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿದ್ದು ಯಾರು? ಇದೆಲ್ಲವನ್ನು ರಾಜ್ಯ ರಾಜಕಾರಣ ನೋಡಿದೆ. ಹೀಗಿದ್ದರು ಬಿಜೆಪಿ - ಜೆಡಿಎಸ್ ತಬ್ಬಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರ ತೆಗೆದವರನೇ ತಬ್ಬಿಕೊಳ್ಳುತ್ತಿದ್ದಾರೆ. ಅಂದರೆ ಎರಡೂ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ ಎಂದೇ ಅರ್ಥವೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, 'ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಬಂದಿದ್ದಾರೆ. ಅವರನ್ನೇ ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿಯವರು ಸಂಪರ್ಕಿಸುತ್ತಿದ್ದಾರೆ ಎಂದರೆ ಏನರ್ಥ ?' ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ನಿಮ್ಮಲ್ಲಿ ಲೀಡರ್ಗಳು ಇಲ್ಲವೇ ? ಒಳ್ಳೆಯ ಅಭ್ಯರ್ಥಿಗಳು ಇದ್ದರೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಳ್ಳಿ ಎಮದು ಸವಾಲ ಹಾಕಿದರು. ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದವರು ಯಾರು? ಎಂದು ಪ್ರಶ್ನಿಸಿದರು.