ಬೆಂಗಳೂರು, ಜ 25 (DaijiworldNews/MS): ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದು ಲಭಿಸಿದ್ದು, 2006ರ ಏಪ್ರಿಲ್ ಒದಕ್ಕಿಂತ ಮೊದಲು ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ, ಆ ದಿನಾಂಕದಿಂದ ಅಥವಾ ಬಳಿಕ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸಿಬ್ಬಂದಿಗೆ ಹಳೇ ಪಿಂಚಣಿ ವ್ಯವಸ್ಥೆ(ಒಪಿಎಸ್)ಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.
ಈ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಡಿ ಇರುವ ಈ ಸಿಬ್ಬಂದಿಯು ಹಳೇ ಪಿಂಚಣಿ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಬಯಸಿದರೆ ತಮ್ಮ ಅಭಿಪ್ರಾಯವನ್ನು 2024ರ ಜೂನ್ 30ರೊಳಗೆ ನಿಗದಿತ ನಮೂನೆಯಲ್ಲಿ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸಬೇಕು. ಒಂದು ಬಾರಿ ಮಾತ್ರ ತಮ್ಮ ಆಯ್ಕೆಯನ್ನು ಸಲ್ಲಿಸಲು ಅವಕಾಶ ಇರುವುದಾಗಿ ಆರ್ಥಿಕ ಇಲಾಖೆ ಆದೇಶ ಮಾಡಿದೆ.
ಒಂದು ವೇಳೆ ಸಿಬ್ಬಂದಿ ನಿಗದಿತ ದಿನಾಂಕದೊಳಗೆ ತಮ್ಮ ಇಚ್ಚೆಯನ್ನು ದಾಖಲಿಸಿದಿದ್ದರೆ ಅವರು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ರಾಜ್ಯದಲ್ಲಿ 2006ರ ಎ. 1ಕ್ಕಿಂತ ಮುನ್ನ ಆಯ್ಕೆ ಹೊಂದಿದವರಿಗೆ ಹಳೆಯ ಪಿಂಚಣಿಗೆ ಸೇರಿಕೊಳ್ಳಲು ಅವಕಾಶ.ಜೂ.30ರೊಳಗೆ ಸಕ್ಷಮ ಪ್ರಾಧಿಕಾರಕ್ಕೆ ನೇರ ಅರ್ಜಿ ಸಲ್ಲಿಸಬೇಕು. ಒಂದು ಬಾರಿ ಮಾತ್ರ ತಮ್ಮ ಆಯ್ಕೆಯನ್ನು ಸಲ್ಲಿಸಲು ಅವಕಾಶ. ಹಳೆಯ ಪಿಂಚಣಿ ಆಯ್ಕೆ ಮಾಡಿಕೊಳ್ಳದಿದ್ದಲ್ಲಿ, ರಾಷ್ಟ್ರೀಯ ಪಿಂಚಣಿಯೇ ಮುಂದುವರಿಕೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.