ಗುವಾಹಟಿ,ಜ 25 (DaijiworldNews/PC): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಅಸ್ಸಾಂ ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಶಾಂತಿ ಕದಡಲು ರಾಹುಲ್ ಯತ್ನಿಸಿದರು ಎಂದು ಆರೋಪಿಸಿ, ಅವರ ವಿರುದ್ಧ ಸಿಎಂ ಸೂಚನೆ ಮೇಲೆ ಪೊಲೀಸರು ಜ 23ರಂದು ಪ್ರಕರಣ ದಾಖಲಿಸಿದ್ದಾರೆ. ಎಂದರು.
ಇನ್ನು ಲೋಕಸಭೆ ಚುನಾವಣೆಯ ಬಳಿಕ ನಾವು ರಾಹುಲ್ ಬಂಧನ ಆಗುವಂತೆ ನೋಡಿಕೊಳ್ಳುತ್ತೇವೆ. ನಾವು ಈಗ ಕ್ರಮ ಕೈಗೊಂಡರೆ, ಅದು ರಾಜಕೀಯ ಪ್ರೇರಿತ ಎಂಬ ಆರೋಪ ನಮ್ಮ ಮೇಲೆ ಕೇಳಿಬರುತ್ತದೆ. ಹೀಗಾಗಿ ಈಗ ಬಂಧಿಸಲ್ಲ ಎಂದು ಹೇಳಿದ್ದಾರೆ.