ಬೆಂಗಳೂರು, ಜ 25 (DaijiworldNews/MS): ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯಾವಾಗಲೂ ಬ್ಲಾಕ್ ಮೇಲ್ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಇಡೀ ದೇಶದಲ್ಲಿ ದೇಶವೇ ಮೊದಲು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಿದ್ದಾಂತವಾಗಿದೆ. ಈಗ ಎಡ, ಬಲ ಸಿದ್ದಾಂತ ಇಲ್ಲ. ದೇಶದ ಅಭಿವೃದ್ದಿ ಮೊದಲ ಆದ್ಯತೆ, ಈಗ ಅದೇ ರಾಜಕೀಯದ ಸಿದ್ದಾಂತವಾಗಿದೆ ಎಂದು ಹೇಳಿದರು.
ಬಿಜೆಪಿ ಯಾವುದೇ ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಇದೆ. ಅದಕ್ಕೆ ಜಗದೀಶ್ ಶೆಟ್ಟರ್ ಬಲ ಸೇರ್ಪಡೆಯಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಯಾರಿಗೆ ಯಾವುದೇ ಕ್ಷೇತ್ರದ ಟಿಕೆಟ್ ನೀಡಿದರೂ ಅವರ ಪರವಾಗಿ ನಾನು ರಾಜ್ಯಾದ್ಯಂತ ಕೆಲಸ ಮಾಡುತ್ತೇನೆ. ನಾವೆಲ್ಲರೂ ಸೇರಿ ಮತ್ತೆ ಮೋದಿಯವರನ್ನು ಮೂರನೇ ಬಾರಿ ಪ್ರಧಾನಮಂತ್ರಿ ಮಾಡಲು ಕೆಲಸ ಮಾಡುತ್ತೇವೆ ಎಂದು ಹೇಳಿದರು.