ಹಾಸನ, ಜ 25 (DaijiworldNews/AA): ಕೆಲವೇ ದಿನದಲ್ಲಿ ಕರೆಂಟ್ ಬಿಲ್ ಜಾಸ್ತಿಯಾಗುತ್ತದೆ. ಆ ಮೂಲಕ ಕೆಇಬಿ ಖಾಸಗಿಕರಣವಾಗುತ್ತದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಈ ಕುರಿತು ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಎಂದಿಗೂ ಕರೆಂಟ್ ಬಿಲ್ ಹೆಚ್ಚಿಗೆ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬೆಲೆ ಏರಿಕೆ ಮಾಡಿದ್ದಾರೆ. ನಾನಿದ್ದಾಗ ಮೀಸಲು ಹಣವಿಟ್ಟಿದ್ದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗಿಕರಣ ಮಾಡ್ತಿದೆ. ಈ ಸರ್ಕಾರವು ಚುನಾವಣೆಗೂ ಪೂರ್ವ 6ನೇ ಗ್ಯಾರಂಟಿ ಬಗ್ಗೆ ಹೇಳಿದ್ದರು. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರು ದೇವೇಗೌಡರಿಗೆ ಹೇಗೆ ಗೌರವ ನೀಡುತ್ತಾರೆ. ಆದರೆ ಕಾಂಗ್ರೆಸ್ ನವರು ದೇವೇಗೌಡರನ್ನು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ಕೆಡವಿದ್ದು ಯಾರು? ಯಾವ್ಯಾವ ಲೋಕಸಭಾ ಸದಸ್ಯರು ಏನು ಮಾಡಿದ್ದಾರೆಂದು ಹೇಳಲಿ ಎಂದು ಹೇಳಿದರು.
ಲೋಕಸಭಾ ಚುನಾವಣೆ ಬಳಿಕ ಯಾವ ಗ್ಯಾರಂಟಿ ಇರಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅವರು ಸಾರಾಯಿಯನ್ನ ನಿಷೇಧಿಸಿದ್ರು. ಆದರೀಗ ಹೆಣ್ಮಕ್ಕಳು ಬೀದಿ ಬೀದಿಲಿ ಎಣ್ಣೆ ಅಂಗಡಿ ಆಗಿದೆ ಎಂದು ಹೇಳುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಮೂರು ಬಾರಿ ಸಾರಾಯಿ ಬೆಲೆ ಏರಿಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.