ಬೆಂಗಳೂರು, ಜ 26 (DaijiworldNews/MS): ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಲ್ ಎಂಬಲ್ಲಿ ಘಟನೆ ನಡೆದಿದೆ.
32 ವರ್ಷದ ನರ್ತನ್ ಭೂಪಣ್ಣ ಕೊಲೆಯಾದ ಯುವಕ.
ಗುಂಡೇಟಿನಿಂದ ಗಾಯಗೊಂಡ ನರ್ತನ್ ನನ್ನು ಕಂಡು ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದ್ದರು. ಈ ವೇಳೆ ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಕೊನೆಯುಸಿರೆಳೆದಿದ್ದಾನೆ
ಘಟನೆಗೆ ಕಾರಣ ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.