ನವದೆಹಲಿ, ಜ 26 (DaijiworldNews/ AK): ಇಂದು, ಪ್ರತಿಯೊಬ್ಬ ಭಾರತೀಯರಿಗೂ ಸಂವಿಧಾನ ಖಾತರಿಪಡಿಸಿರುವ ಮೂಲಭೂತ ಹಕ್ಕುಗಳು ನಿಧಾನವಾಗಿ ಅತಿಕ್ರಮಣಗೊಳ್ಳುತ್ತಿವೆ ಮತ್ತು ನಾಶವಾಗುತ್ತಿವೆ. ಭಾವನಾತ್ಮಕ ವಿಷಯಗಳನ್ನು ಬಳಸಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ನಾಗರಿಕರಿಂದ ಸತ್ಯವನ್ನು ಮರೆಮಾಚಲು ಸರ್ಕಾರ ಪ್ರಯತ್ನಿಸುತ್ತಿದೆ. ಸಂವಿಧಾನದ ಮೇಲಿನ ದಾಳಿಯು ಯೋಜಿತ ಪಿತೂರಿಯ ಭಾಗವಾಗಿದೆ. ಇಂದು ನಮ್ಮ ಸಂವಿಧಾನದಲ್ಲಿ ನಂಬಿಕೆಯಿಲ್ಲದ ಜನರು ಸರ್ಕಾ ರವನ್ನು ನಡೆಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನವು ಭಾರತೀಯ ನಾಗರಿಕತೆಯ ಮೌಲ್ಯಗಳಾದ ನ್ಯಾಯ, ಘನತೆ, ಸಮಾನತೆ ಮತ್ತು ಎಲ್ಲರಿಗೂ ಸಮಾನವಾದ ಗೌರವವನ್ನು ಆಧರಿಸಿದೆ. ಇದು ನಮ್ಮ ದೇಶದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀ ಯ ಪರಿವರ್ತನೆಗೆ ಅಡಿಪಾಯವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯಾಯ,ಸಮಾನತೆ, ಭ್ರಾತೃತ್ವ, ಸ್ವಾತಂತ್ರ್ಯ , ಜಾತ್ಯತೀತತೆ ಮತ್ತು ಸಮಾಜವಾದವು ಭಾರತದ ಆಧಾರ ಸ್ತಂಭಗಳಾಗಿವೆ. ಆದರೆ, ಇಂದು ಈ ಸ್ತಂಭಗಳ ಮೇ ಲೆ
ಸರ್ಕಾರದಿಂದಲೇ ದಾಳಿ ನಡೆಯುತ್ತಿದೆ ಎಂ ದು ಖರ್ಗೆ ಆರೋಪಿಸಿದ್ದಾರೆ.
ನಮ್ಮ ಸಂ ವಿಧಾನದ ಸಂಸ್ಥಾಪನಾ ಸದಸ್ಯರಾದ ಪಂಡಿತ್ ಜವಾಹರ್ಲಾಲ್ ನೆಹರೂ, ಬಾಬಾ ಸಾಹೇಬ್ ಅಂಬೇ ಡ್ಕರ್, ಸರ್ದಾ ರ್ ವಲ್ಲಭ ಬಾಯಿ ಪಟೇ ಲ್, ಬಾಬು ರಾಜೇಂದ್ರ ಪ್ರಸಾದ್, ಮೌಲಾನಾ ಆಜಾದ್ ಮತ್ತು ಸಂವಿಧಾನ ರಚನಾ ಸಭೆಯ ಇತರ ದಿಗ್ಗಜರು ಸಂವಿಧಾನವು ಇಂತಹ ಸವಾಲುಗಳನ್ನು ಎದುರಿಸುತ್ತದೆ ಊಹಿಸಿರಲಿಲ್ಲ ಎಂದರು.