ಬೆಂಗಳೂರು, ಎ24(Daijiworld News/SS): ಈ ಬಾರಿಯ ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದಾಗ ಮಡಿದವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರವಾಗಿ ನೀಡಲು ಚುನಾವಣಾ ಆಯೋಗ ಆದೇಶ ನೀಡಿದೆ.
ರಾಜ್ಯದಲ್ಲಿ ಏ.18 ರಂದು ನಡೆದ ಪ್ರಥಮ ಹಂತದ ಲೋಕಸಭಾ ಚುನಾವಣೆಯಲ್ಲಿ ಮತ್ತು 23ರಂದು ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ಒಟ್ಟು 8 ಅಧಿಕಾರಿಗಳು ಮೃತಪಟ್ಟಿದ್ದಾರೆ. 7 ಜನರು ಹೃದಯಾಘಾತದಿಂದ ಮೃತರಾದರೆ, ಇನ್ನೊಬ್ಬರು ಅಪಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ವಿಶೇಷ ಪ್ರಕರಣದಡಿ ಮಡಿದವರ ಕುಟುಂಬಗಳಿಗೆ ತಲಾ 15 ಲಕ್ಷ ರೂಪಾಯಿಯನ್ನು ಪರಿಹಾರವಾಗಿ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ದೇಶದಲ್ಲಿ ಲೋಕಸಭಾ ಚುನಾವಣೆಯು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಮೇ 23ಕ್ಕೆ ಫಲಿತಾಂಶ ಹೊರಬೀಳಲಿದೆ.