ಚೆನ್ನೈ, ಜ 27 (DaijiworldNews/AA): ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೋಂದೇ ನಮ್ಮ ಗುರಿಯಾಗಿರಬೇಕು. ಅದಕ್ಕಾಗಿ ಬಿಜೆಪಿ ವಿರುದ್ಧದ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಪ್ರತಿಯೊಬ್ಬರಿಗೂ ಒಂದೇ ಗುರಿ ಹೊಂದಿರಬೇಕು. ಅದು ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡಬಾರದು. ಒಂದು ವೇಳೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆ ಇರುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.