ಬಾಗಲಕೋಟೆ, ಜ 28 (DaijiworldNews/HR): ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಮೇಶ್ ಜಿಗಜಿಣಗಿ ಅವರು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಇನ್ನು ಕೂಡಲೇ ಅವರನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.