ಬೆಂಗಳೂರು, ಜ 29 (DaijiworldNews/AK):ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದರು. 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.