ನವದೆಹಲಿ, ಎ24(Daijiworld News/SS): 3 ಹಂತಗಳ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ 21 ವಿಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಿಡಿಪಿ ನಾಯಕ, ಆಂಧ್ರಪ್ರದೇಶ ಸಿಎಂ ಇವಿಎಂಗಳು ಹ್ಯಾಕ್ ಆಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಎಸ್ಪಿ ನಾಯಕ ಅಖೀಲೇಶ್ ಯಾದವ್ ಅವರು ಇವಿಎಂಗಳಲ್ಲಿ ಅಕ್ರಮವಾಗುತ್ತಿದ್ದು, ಎಲ್ಲಾ ಮತಗಳು ಬಿಜೆಪಿಗೆ ಹೋಗುತ್ತಿವೆ ಎಂದು ಆರೋಪಿಸಿದ್ದರು.
ಹೀಗಾಗಿ ಟಿಡಿಪಿ, ಎನ್ಸಿಪಿ, ಟಿಎಂಸಿ, ಡಿಎಂಕೆ, ಆಪ್, ಸಿಪಿಐ (ಎಂ), ಸಿಪಿಐ ಸೇರಿದಂತೆ 21 ಪಕ್ಷಗಳು ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಪರೀಕ್ಷೆ ನಡೆಸಬೇಕು ಎಂದು ಕೋರ್ಟ್ಗೆ ಮನವಿ ಮಾಡಿವೆ.
21 ವಿಪಕ್ಷಗಳು ಶೇಕಡಾ 50 ರಷ್ಟು ವಿವಿಪ್ಯಾಟ್ ಬಳಸಲಾಗಿರುವ ಇವಿಎಂಗಳನ್ನು ಪರೀಕ್ಷೆ ಮಾಡಲು ಚುನಾವಣಾ ಆಯೋಗಕ್ಕೆ ಸಲಹೆ ನೀಡುವ ಮೂಲಕ ಮತ ಎಣಿಕೆಯಲ್ಲಿ ಪಾರದರ್ಶಕತೆ ತೋರಬೇಕು ಎಂದು ಕೋರ್ಟ್ಗೆ ಮನವಿ ಮಾಡಿವೆ.