ರಾಯಚೂರು,ಏ24(Daijiworld News/AZM):ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುದರ್ಶನ್ ಯಾದವ್ ನನ್ನು ನಾಲ್ಕು ದಿನಗಳ ಕಾಲ ನ್ಯಾಯಾಲಯ ಸಿಐಡಿ ವಶಕ್ಕೆ ನೀಡಿದೆ.
ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಹತ್ತು ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಸಿಐಡಿ ಪೊಲೀಸರ ಪರ ವಕೀಲರು ನ್ಯಾಯಾಲದ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ನ್ಯಾಯಾಧೀಶರಾದ ಅವಿನಾಶ್ ಗಾಳಿಯವರು ಆರೋಪಿ ಸುದರ್ಶನ್ ಯಾದವ್ ನನ್ನು ನಾಲ್ಕು ದಿನ ಸಿಐಡಿ ವಶಕ್ಕೆ ನೀಡುವುದಕ್ಕೆ ಆದೇಶ ನೀಡಿದ್ದಾರೆ.