ಕಲಬುರಗಿ, ಜ 30 (DaijiworldNews/HR): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ರಿಲೀಫ್ ದೊರೆತಿದೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಇನ್ನು ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠವು ಎಫ್ಐಆರ್ಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ ಎಂದು ವರದಿಯಾಗಿದೆ.
ಚಕ್ರವರ್ತಿ ಸೂಲಿಬೆಲೆ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡನೆ ಮಾಡಿದ್ದರು.
ಇತ್ತೀಚೆಗೆ ರಾಯಚೂರಿನ ಶಿರವಾದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, ಕಲಬುರಗಿಯ ಇಎಸ್ಐ ಆಸ್ಪತ್ರೆಯ ಬಗ್ಗೆ ಮಾತನಾಡಿದ್ದರು. ಇದೇ ವೇಳೆ, ಆಸ್ಪತ್ರೆಯನ್ನು ತಮ್ಮ ಹೆಸರಿನ ಪ್ರಚಾರಕ್ಕೆ ಖರ್ಗೆ ಅವರು ಬಳಸಿದ್ದಾರೆ. ಜನರ ತೆರಿಗೆ ಹಣದಲ್ಲಿ ಅವರು ತಮ್ಮ ಹೆಸರನ್ನು ಶಾಶ್ವತಗೊಳಿಸಲು ಮುಂದಾದ ಅಯೋಗ್ಯರಾಗಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.